
Students News
ಬೆಂಗಳೂರು
ಕೊರೊನಾ ಸೋಂಕು ಕಾರಣದಿಂದ ಕಳೆದೆರಡು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ.
ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪಾಠ ಇಲ್ಲ, ಸರಿಯಾದ ಸಮಯಕ್ಕೆ ಪರೀಕ್ಷೆಗಳು ನಡೆಯುತ್ತಿಲ್ಲ, ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಡ್ಡಾಯ ಹಾಜರಾತಿ ನಿಯಮವನ್ನು ಜಾರಿಗೊಳಿಸಿದೆ.
ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಂದರ್ಭದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಶೇ.75ರಷ್ಟು ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಇದರ ಬಗ್ಗೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ವರ್ಷದಲ್ಲಿ ಶೇ.75ರಷ್ಟು ಹಾಜರಾತಿಯನ್ನು ಹೊಂದಿರುವುದು ಕಡ್ಡಾಯವಲ್ಲ. SSLC PUC Students News
ಈ ವಿಚಾರವಾಗಿ ಕಾಲೇಜು ಮಟ್ಟದಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದರು.
ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 2,000 ರಿಂದ 4,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿಲ್ಲ.
ಕರ್ನಾಟಕ ಶಿಕ್ಷಣ ಕಾಯ್ದೆ – 2006ರ ನಿಯಮ 21, ವಿದ್ಯಾರ್ಥಿಗಳು 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಶೇ.75ರಷ್ಟು ಹಾಜರಾತಿಯನ್ನು ಕಡ್ಡಾಯಗೊಳಿಸುತ್ತದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಕಾಯ್ದೆಗೆ ತರಲಾದ ತಿದ್ದುಪಡಿಗಳ ಪ್ರಕಾರ, ಯಾವುದೇ ವಿದ್ಯಾರ್ಥಿಗಳು ಹಾಜರಾತಿಯಲ್ಲಿ (ಶೇ.75ಕ್ಕಿಂತ ಕಡಿಮೆ) ಕೊರತೆಯಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ. SSLC PUC Students News
SSLC ಪರೀಕ್ಷೆ ವೇಳಾಪಟ್ಟಿ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್‌ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯುತ್ತವೆ.sslc exam 2022
28 – ಮಾರ್ಚ್ ಪ್ರಥಮ ಭಾಷೆ
30 – ಮಾರ್ಚ್ ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ)
01 – ಏಪ್ರಿಲ್ ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್,
04 – ಏಪ್ರಿಲ್ ಗಣಿತ, ಸಮಾಜಶಾಸ್ತ್ರ.10th sslc exam date 2022
06 – ಏಪ್ರಿಲ್ ಸಮಾಜ ವಿಜ್ಞಾನ ಏ.8- ತೃತೀಯ ಭಾಷೆ
11 – ಏಪ್ರಿಲ್ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ.10th sslc exam date 2022
II PUC ಪರೀಕ್ಷೆ ವೇಳಾಪಟ್ಟಿ
ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.2nd puc annual exam 2022 time table
ಪರೀಕ್ಷೆ ಎಂದಿನಂತೆ ಏ.16ರಿಂದ ಮೇ.6ರವರೆಗೆ ನಡೆಯುತ್ತವೆ, ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.sslc puc students
ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://pue.kar.nic.in/ ನಲ್ಲಿ ನೋಡಬಹುದು.
ಇದರ ಪ್ರಕಾರವಾಗಿ ಏ.21ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದೆ.2nd puc exam 2022
16 – ಏಪ್ರಿಲ್ – ಗಣಿತ, ಶಿಕ್ಷಣ, ಬೇಸಿಕ್ ಗಣಿತ
18 – ಏಪ್ರಿಲ್ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
19 – ಏಪ್ರಿಲ್ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
20 – ಏಪ್ರಿಲ್ – ಇತಿಹಾಸ, ಭೌತಶಾಸ್ತ್ರ.
21 – ಏಪ್ರಿಲ್ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
22 – ಏಪ್ರಿಲ್ – ಲಾಜಿಕ್, ಬಿಸಿನೆಸ್ ಸ್ಟಡೀಸ್
23 – ಏಪ್ರಿಲ್ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ
25 – ಏಪ್ರಿಲ್ – ಅರ್ಥಶಾಸ್ತ್ರ
26 – ಏಪ್ರಿಲ್ – ಹಿಂದಿ
28 – ಏಪ್ರಿಲ್ – ಕನ್ನಡ
29 – ಏಪ್ರಿಲ್ – ಅರೇಬಿಕ್. SSLC PUC Students News
30 – ಏಪ್ರಿಲ್ – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
02 – ಮೇ – ಭೂಗೋಳ, ಜೀವಶಾಸ್ತ್ರ
04 – ಮೇ – ಇಂಗ್ಲಿಷ್
06 – ಮೇ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಕನ್ನಡ (ಐಚ್ಛಿಕ.2nd puc exam 2022 karnataka