
actor rajesh death
ಹಿರಿಯ ನಟ ರಾಜೇಶ್
ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ಎಂದು ಗುರುತಿಸಿಕೊಂಡಿದ್ದ ರಾಜೇಶ್ ಅವರು ಇಂದು ಮುಂಜಾನೆ (ಫೆ.19) 2.20ರವರೆಗೆ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾರೆ.
ಸುಮಾರು 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಪ್ರೇಕ್ಷಕರ ಮನಗೆದ್ದಿದ್ದ ರಾಜೇಶ್, ರಂಗಭೂಮಿ ಕಲಾವಿದರೂ ಕೂಡಾ ಆಗಿದ್ದರು.
ಗಣ್ಯರ ಸಂತಾಪ
ಹಿರಿಯ ನಟನ ಮರಣಕ್ಕೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಗಣ್ಯರು ಸೇರಿದಂತೆ ಚಿತ್ರರಂಗ ಕಂಬನಿ ಮಿಡಿದಿದ್ದಾರೆ.actor rajesh death
ಮುಖ್ಯಮಂತ್ರಿ ಬೊಮ್ಮಾಯಿ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ.
ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜೇಶ್ ಅವರೊಂದಿಗೆ ಒಡನಾಟದ ಸಮಯವನ್ನು ನೆನಪು ಮಾಡಿಕೊಂಡಿದ್ದಾರೆ.
‘‘ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು.
ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ, ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’’ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದು .
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಂಗಭೂಮಿ ಹಿನ್ನೆಲೆಯಿಂದ ಬೆಳ್ಳಿತೆರೆ ಪ್ರವೇಶಿಸಿದ್ದ ರಾಜೇಶ್ ಅವರ ಮರಣದಿಂದ ಚಿತ್ರರಂಗ ಹಿರಿಯ ನಟನನ್ನು ಕಳೆದುಕೊಂಡಂತಾಗಿದೆ.
ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದಷ್ಟು ನಷ್ಟ ಎಂದು ಹೇಳಿದ್ದಾರೆ.
ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ‘ರಾಜೇಶ್ ಸಹಜ ಅಭಿನಯದಿಂದ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ವ್ಯಕ್ತಿ’.
ಕನ್ನಡಿಗರ ಮನೆ-ಮನಗಳಲ್ಲಿ ಮನೆಯ ಮಾತಾಗಿದ್ದರು ಎಂದು ಸಂತಾಪ ಸೂಚಿಸಿದ್ದಾರೆ.
ಜಗದೀಶ್ ಶೆಟ್ಟರ್, ಬಿ.ಸಿ.ಪಾಟೀಲ್, ಸದಾನಂದ ಗೌಡ ಮೊದಲಾದ ರಾಜಕೀಯ ಗಣ್ಯ ನಾಯಕರು ಹಿರಿಯ ನಟನ ನಿಧನಕ್ಕೆ ಕಂಬನಿ ಸೂಚಿಸಿದ್ದಾರೆ.actor rajesh death
ಯುವನಟ ನಿಖಿಲ್ ಕುಮಾರ್, ದೊಡ್ಡಣ್ಣ ಸೇರಿದಂತೆ ಚಿತ್ರರಂಗ ಹಾಗೂ ಅಭಿಮಾನಿಗಳು ರಾಜೇಶ್ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ
ರಾಜೇಶ್ ಅಂತ್ಯಕ್ರಿಯೆಯ ಕುರಿತು ಅವರ ಅಳಿಯ ಅರ್ಜುನ್ ಸರ್ಜಾ ಮಾಹಿತಿ ಕೊಟ್ಟಿದ್ದಾರೆ, 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ.actor rajesh death
ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯುತ್ತದೆ, ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.