Books Offer -ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ ಇಂದೇ ಖರೀದಿಸಿ

Books Offer -ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ ಇಂದೇ ಖರೀದಿಸಿ

Books Offer -ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ ಇಂದೇ ಖರೀದಿಸಿ

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2021ರ ನವೆಂಬರ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. -Books Offer

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ ಲೈನ್‌ ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.-Books Offer

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯವಿದೆ.

ಪ್ರಾಧಿಕಾರದ ವೆಬ್‌ಸೈಟ್‌ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ.

ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು.

https://www.kannadapustakapradhikara.com/books.php?discounts=50

ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಸ್ವಾಗತ


ಕನ್ನಡದಲ್ಲಿ ಲೇಖಕರ / ಪ್ರಕಾಶಕರ / ಮಾರಾಟಗಾರರ / ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸಿ ಓದುಗರಲ್ಲಿ ಉತ್ತಮ ವಾಚನಾಭಿರುಚಿಯನ್ನು ಬೆಳೆಸಿ, ರಾಜ್ಯಾದ್ಯಂತ ಓದುಗರಿಗೆ ಮೌಲಿಕ ಪುಸ್ತಕಗಳನ್ನು ಸುಲಭ ಬೆಲೆಯಲ್ಲಿ ದೊರೆಯುವಂತೆ ಮಾಡುವುದು ಹಾಗೂ ಕನ್ನಡ ಪುಸ್ತಕೋಧ್ಯಮವನ್ನು ಜನಪರವಾಗಿ ಹಾಗೂ ದೃಢವಾಗಿ ಬೆಳೆಸಿ ಭದ್ರವಾಗಿ ಬೇರೂರುವಂತೆ ಮಾಡುವುದು ಕನ್ನಡ ಪುಸ್ತಕ ಪ್ರಾಧಿಕಾರದ ಉದ್ದೇಶ

Social Share

Leave a Reply

Your email address will not be published. Required fields are marked *