ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ!

CM Bommai

Cabinet Explassion

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ನವದೆಹಲಿಗೆ ಹೋಗಿದ್ದಾರೆ, ಮುಖ್ಯಮಂತ್ರಿಗಳ ದೆಹಲಿ ಭೇಟಿ Cabinet Explassion ಕುರಿತು ಮತ್ತೆ ಚರ್ಚೆ ಆರಂಭವಾಗುವಂತೆ ಮಾಡಿದೆ.

ಮಂಗಳವಾರ ಅಂದರೆ ಇವತ್ತು ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ ಅಂತರರಾಜ್ಯ ನದಿ ನೀರು ಹಂಚಿಕೆ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಚರ್ಚೆ ಮಾಡಲಿದ್ದಾರೆ.

ಕರ್ನಾಟಕ-ತಮಿಳುನಾಡು ನಡುವೆ ಜಟಾಪಟಿಗೆ ಕಾರಣವಾಗಿರುವ ಮೇಕೆದಾಟು ಯೋಜನೆಯ ಕುರಿತು ರಾಜ್ಯದಲ್ಲಿ ನಡೆದ ಸರ್ವಪಕ್ಷದ ಸಭೆಯ ವಿವರಗಳನ್ನು ಸಚಿವರಿಗೆ ತಿಳಿಸಲಿದ್ದಾರೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿರುವ ಭಾರತೀಯ ಜನತಾ ಪಕ್ಷ ಸಂಭ್ರಮಾಚರಣೆಯಲ್ಲಿ ತೊಡಗಿದೆ.

ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾದಲ್ಲಿ ಆಧಿಕಾರ ಮರು ಸ್ಥಾಪನೆ ಬೆನ್ನಲ್ಲೇ ಮುಂಬರುವ ಚುನಾವಣೆಗೆ ಬಿಜೆಪಿ ತನ್ನ ಸಿದ್ಧತೆ ನಡೆಸುತ್ತಿದೆ.

ಈ ಮಧ್ಯ ಚುನಾವಣೆ ಫಲಿತಾಂಶ ಹೊರ ಬರುತ್ತಿದ್ದಂತೆ ಕರ್ನಾಟಕದಲ್ಲೂ ಬಿರುಸಿನ ರಾಜಕೀಯ ಚಟುವಟಿಕೆಗಳು, ರಾಜ್ಯ ನಾಯಕರ ದೆಹಲಿ ಪ್ರವಾಸ ಹೆಚ್ಚಾಗುವ ಮುನ್ಸೂಚನೆ ಸಿಗಬಹುದು ಎಂದೆನಿಸಲಾಗಿತ್ತು.

ಆದರೆ, ಇದಕ್ಕೆಲ್ಲ ಸದ್ಯಕ್ಕೆ ಅಲ್ಪವಿರಾಮ ಇಡಲಾಗಿದ್ದು, ಯುಗಾದಿ ನಂತರ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುವ ಸಂದೇಶ ಹೈಕಮಾಂಡ್ ಕಡೆಯಿಂದ ಕರ್ನಾಟಕ ಬಿಜೆಪಿಗೆ ಸಿಕ್ಕಿದೆ.

ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ಜಲ ವಿವಾದದ ಬಗ್ಗೆ ಮಾತುಕತೆ ನಡೆಸಲಾಗುತ್ತದೆ.

ಕಳೆದ ವಾರ ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಅದರಂತೆ ಏಪ್ರಿಲ್ 5ರ ಮಂಗಳವಾರ ಇಂದು ದೆಹಲಿ ಭೇಟಿ ಕೈಗೊಂಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಲಿದ್ದಾರೆ.

ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ನಡೆಸಿದ ನಂತರ ಬೊಮ್ಮಾಯಿ ದೆಹಲಿ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ಭೇಟಿಯ ವೇಳೆ ಅಮಿತ್ ಶಾ ಸಂಪುಟ ವಿಸ್ತರಣೆ/ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು.

ಆದ್ದರಿಂದ ಈ ಕುರಿತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಇತರ ಹೈಕಮಾಂಡ್ ನಾಯಕರ ಜೊತೆ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಒಂದು ವೇಳೆ ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದರೆ ಕೆಲವು ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ, ಈ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಕೆ. ಎಸ್.‌ ಈಶ್ವರಪ್ಪ “ಕಾದು ನೋಡಿ” ಎಂಬ ಉತ್ತರವನ್ನು ಸೋಮವಾರ ಹೇಳಿದ್ದಾರೆ.

ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆ ಸಫಲವಾದರೆ ಏಪ್ರಿಲ್ 8ರಂದು ಸಂಪುಟ ವಿಸ್ತರಣೆ/ ಪುನಾರಚನೆ ನಡೆಯುವ ಸಾಧ್ಯತೆವಿದೆ ಎಂಬ ಮಾಹಿತಿಯೂ ಇದೆ.

ಮಂಗಳವಾರವೇ ಮುಖ್ಯಮಂತ್ರಿಗಳು ದೆಹಲಿ ಭೇಟಿ ಮುಗಿಸಿ ವಾಪಸ್ ಬರುವ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಈಗ ಸಂಪುಟ ವಿಸ್ತರಣೆ ಮಾಡಿದರೆ ಆಗುವ ಪರಿಣಾಮಗಳ ಕುರಿತು ಹೈಕಮಾಂಡ್ ನಾಯಕರು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಈ ಕುರಿತು ಸುಧೀರ್ಘ ಚರ್ಚೆಯನ್ನು ನಡೆಸುವ ಸಾಧ್ಯತೆ ಇದ್ದು, ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಿ ಚುನಾವಣೆಯಲ್ಲಿ ಪಕ್ಷ ಸಂಘಟನೆಯ ಹೊಣೆಯನ್ನು ನೀಡಲು ಸಹ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ.

ಯಾವ ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎನ್ನುವುದು ಸಹ ತುಂಬಾ ಕುತೂಹಲ ಮೂಡಿಸಿದೆ.

ಸಂಪುಟ ವಿಸ್ತರಣೆ ಮಾಡಬೇಕು ಎಂದು ಬಿಜೆಪಿಯ ಹಿರಿಯ ಶಾಸಕರು ಎರಡು ತಿಂಗಳ ಹಿಂದೆಯೇ ಬೇಡಿಕೆ ಇಟ್ಟಿದ್ದು, ಆದರೆ ಹೈಕಮಾಂಡ್ ನಾಯಕರು ಐದು ರಾಜ್ಯಗಳ ಚುನಾವಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದ ಕಾರಣ ಮುಖ್ಯಮಂತ್ರಿಗಳು ಭೇಟಿ ಮಾಡಲು ಸಾಧ್ಯ ಆಗಿರಲಿಲ್ಲ.

ಈಗ ಐದು ರಾಜ್ಯಗಳ ಚುನಾವಣೆ ಮುಕ್ತಾಯಗೊಂಡು ಸರ್ಕಾರ ರಚನೆಯಾಗಿದ್ದು, ಅಲ್ಲದೇ ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವುದರಿಂದ ಹೈಕಮಾಂಡ್ ನಾಯಕರು ರಾಜ್ಯದ ಬಗ್ಗೆ ವಿಶೇಷ ಗಮನ ವಹಿಸಿದ್ದಾರೆ.

ಹಿಜಾಬಗೋಸ್ಕರ ಶಿಕ್ಷಣದಿಂದ ವಂಚಿತರಾಗಬೇಡಿ!-basavaraj bommai

https://jcs.skillindiajobs.com/

Social Share

Leave a Reply

Your email address will not be published. Required fields are marked *