ಡಾ.ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೋರಿ ಸಲ್ಲಿಸಿದ ಅರ್ಜಿ ವಜಾ!

Dr Shivakumara Swami

ಸಿದ್ದಗಂಗಾ ಮಠ

‘ನಡೆದಾಡುವ ದೇವರು’ ಎಂದೇ ಖ್ಯಾತಿ ಗಳಿಸಿದ್ದ ಕೋಟ್ಯಂತರ ಮಕ್ಕಳಿಗೆ ಅಕ್ಷರ ಮತ್ತು ಅನ್ನ ದಾಸೋಹಕ್ಕೆ ಕಾರಣವಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಪಿಐಎಲ್ ಹೈಕೋರ್ಟ್ ವಜಾಗೊಳಿಸಿದೆ.

ರೆಹಾನ್ ಖಾನ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳು ರಿತುರಾಜ್ ಅವಸ್ಥಿ ಮತ್ತು ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯಪೀಠ ವಿಚಾರಣೆಯು ನಡೆಸಿತು.

ವಾದ ಮಾಡಿದ ಬಳಿಕ ನ್ಯಾಯಪೀಠ, ಹೈಕೋರ್ಟ್ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ.

ದೇಶದ ಅತ್ಯುನ್ನತ ನಾಗರೀಕ ಸೇವಾ ಪ್ರಶಸ್ತಿಗಳಲ್ಲಿ ಒಂದಾದ ಭಾರತ ರತ್ನವನ್ನು ಯಾವ ವ್ಯಕ್ತಿಗೆ ಪ್ರಧಾನ ಮಾಡಬೇಕು ಎನ್ನುವ ಬಗ್ಗೆ ‌ ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತಾರೆ.

ನ್ಯಾಯಾಲಯ ಇಂತಹವರಿಗೆ ಪ್ರಶಸ್ತಿಯನ್ನು ನೀಡುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟು ಪಿಐಎಲ್ ವಜಾ ಮಾಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲ ಮೊಹಮ್ಮದ್ ತಾಹೀರ್, ಗ್ರಾಮೀಣ ಪ್ರದೇಶಗಳಲ್ಲಿ ನೂರಾರು ಶಾಲೆಗಳನ್ನು ತೆರದು ಜ್ಞಾನ ದಾಸೋಹ ನಡೆಸುವುದರ ಜೊತೆಗೆ ಕೋಟ್ಯಂತರ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಸಿದ್ಧಗಂಗಾ ಶ್ರೀಗಳು ಸ್ವಾರ್ಥ ರಹಿತ ಸೇವೆ ಮಾಡಿದ್ದಾರೆ.

ಇವರಿಗೆ ಭಾರತ ರತ್ನ ನೀಡಲು ರಾಷ್ಟ್ರಪತಿಗೆ ಶಿಫಾರಸು ಮಾಡುವಂತೆ ಅರ್ಜಿದಾರರು 2021ರ ಅ.12ರಂದು ಪ್ರಧಾನಮಂತ್ರಿಗಳ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಇದನ್ನು ಇನ್ನೂ ಪರಿಗಣಿಸಿಲ್ಲ ಎಂದರು.

ಹಾಗಾಗಿಯೇ ನ್ಯಾಯಾಲಯ ಪ್ರಧಾನಮಂತ್ರಿ ಅವರಿಗೆ ಪ್ರತಿಷ್ಠಿತ ಭಾರತ ರತ್ನ ಗೌರವಕ್ಕೆ Dr Shivakumara Swami ಶ್ರೀಗಳ ಹೆಸರನ್ನು ಪರಿಗಣಿಸುವಂತೆ ಸೂಚನೆ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಆದರೆ ವಾದವನ್ನು ಆಲಿಸಿದ ನ್ಯಾಯಪೀಠ, ಕೋರ್ಟ್ ಆ ರೀತಿ ಪ್ರಶಸ್ತಿಯನ್ನು ಇಂತಹುದೇ ವ್ಯಕ್ತಿಗೆ ನೀಡಿ ಎಂದು ನಿರ್ದೇಶನವು ನೀಡಲಾಗದು.

ಇದು ಸರ್ಕಾರಕ್ಕೆ ಬಿಟ್ಟ ವಿಚಾರ, ಕಲೆ, ವಿಜ್ಞಾನ, ವೈದ್ಯಕೀಯ ಸೇರಿದಂತೆ ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸರ್ಕಾರವೇ ಅರ್ಹರನ್ನು ಪ್ರಶಸ್ತಿಗೆ ಆಯ್ಕೆಯನ್ನು ಮಾಡುತ್ತದೆ.

ರೆಹಾನ್ ಖಾನ್ ಎಂಬುವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ.

ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ, ಆದರೆ ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ

Dr Shivakumara Swamiಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಮಠದ ಆವರಣದಲ್ಲಿ ಇಂದು (ಏಪ್ರಿಲ್ 1) ಅದ್ಧೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದಾರೆ.

ಅಮಿತ್ ಶಾ ಬೆಳಗ್ಗೆ 10.30 ಕ್ಕೆ ತುಮಕೂರು ವಿವಿಯ ಹೆಲಿಪ್ಯಾಡ್‌ಗೆ ಆಗಮಿಸಿದ ಬಳಿಕ ರಸ್ತೆಯ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ಪ್ರಯಾಣ ಮಾಡಿದರು.

ಮುಂಜಾನೆ 11 ಗಂಟೆ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆಯನ್ನು ಸಲ್ಲಿಸಿದರು.

ಅಮಿತ್ ಶಾ ಭಾಗಿ

ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕಾರ್ಯಕ್ರಮವು ನಡೆದಿದೆ. ಈ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ.

ಈ ಕಾರ್ಯಕ್ರಮದ ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ.shivakumaraswami

ನೇರವಾಗಿ ಮನವಿ ಸಲ್ಲಿಸಿ

ವಿಚಾರಣೆ ವೇಳೆ ಸಿಜೆ, ಮಾಧ್ಯಮಗಳಲ್ಲಿ ಓದಿದೆ, ಗೃಹ ಸಚಿವರು ಬೆಂಗಳೂರಿನಲ್ಲಿಯೇ ಇದ್ದಾರೆ, ನ್ಯಾಯಾಲಯಕ್ಕೆ ಬರುವ ಬದಲು ಅರ್ಜಿದಾರರು ನೇರ ಅವರಿಗೆ Dr Shivakumara Swami ಭಾರತ ರತ್ನ ಕೊಡಿಸುವಂತೆ ಮನವಿಯನ್ನು ಸಲ್ಲಿಸಬಹುದಿತ್ತಲ್ಲಾ ಎಂದು ವಕೀಲರನ್ನು ಕೇಳಿದರು.

ಅದಕ್ಕೆ ಉತ್ತರಿಸಿದ ವಕೀಲರು, ಗೃಹ ಸಚಿವರಿಗೆ ಯಾವುದೇ ಅಧಿಕಾರವಿಲ್ಲ, ಕೇವಲ ಪ್ರಧಾನಮಂತ್ರಿ ಮಾತ್ರ ಭಾರತ ರತ್ನ ನೀಡಲು ರಾಷ್ಟ್ರಪತಿಗೆ ಹೆಸರು ಶಿಫಾರಸು ಮಾಡಲು ಅವಕಾಶ ಆ ಬಗ್ಗೆ ಮಾರ್ಗಸೂಚಿ ಅತ್ಯಂತ ಸ್ಪಷ್ಟವಾಗಿದೆ ಎಂದರು.

ಹಲವು ವರ್ಷಗಳ ಬೇಡಿಕೆ

ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.

Dr Shivakumara Swami ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಜಾವಾಗಿದೆ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂಬ ಬೇಡಿಕೆಯು ಹಲವು ವರ್ಷಗಳಿಂದಲೂ ಇದೆ.

ಭಕ್ತರು ಹಾಗೂ ಮಠಾಧೀಶರು ಭಾರತ ರತ್ನಕ್ಕಾಗಿ ಹಕ್ಕೊತ್ತಾಯ ಮಂಡಿಸುತ್ತಲೇ ಇದ್ದಾರೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ.

ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮಿ ಅವರ ಹೆಸರು ಘೋಷಣೆ!

https://jcs.skillindiajobs.com/

Social Share

Leave a Reply

Your email address will not be published. Required fields are marked *