
State Budget 2022
ಬಜೆಟ್ ಮಂಡನೆ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪ್ರಥಮ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.
ಬೊಮ್ಮಾಯಿ ಶುಕ್ರವಾರ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ ಮತ್ತು ಇತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದರು.
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕಲ್ಯಾಣ ಯೋಜನೆಗಳಲ್ಲಿ ಹೆಚ್ಚಿನ ಅನುದಾನವನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಅಲ್ಲದೆ, ಬೆಂಗಳೂರು ನಗರಕ್ಕೆ ಹೆಚ್ಚು ನೆರವಾಗುವ ಮೇಕೆದಾಟು ನೀರಿನ ಯೋಜನೆಗೆ ಮುಖ್ಯಮಂತ್ರಿಗಳು 1000 ಕೋಟಿ ರೂ.
ಆರ್ಥಿಕತೆ ಕೇವಲ ಟೈರ್ 1 ನಗರಗಳಿಗೆ ಸೀಮಿತವಾಗದೆ ಜಿಲ್ಲೆಗಳಿಗೂ ಆರ್ಥಿಕತೆ ಹಂಚಿಕೆಯಾಗಬೇಕು ಎಂಬ ಕಾಳಜಿಯಿಂದ ಜಿಲ್ಲೆಗಳನ್ನು ಗಮದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. State Budget 2022
ಬಜೆಟನಲ್ಲಿ ಯಾವ ಜಿಲ್ಲೆಗಳಿಗೆ ಪ್ರಾಮುಖ್ಯತೆ
01. ಹಾವೇರಿಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ
02. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ
03. ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು
04. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜು
05. ಹಿರೇಕೇರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
06. ಧಾರವಾಡ ಕೃಷಿ ವಿವಿಯಲ್ಲಿ ಡಾ.ಎಸ್.ವಿ. ಪಾಟೀಲ ಕೃಷಿ, ಸಂಶೋಧನೆ ಹಾಗೂ ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ
07. ಮೆಣಸು ಮತ್ತು ಸಾಂಬಾರು ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ
08. ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ.cm basavaraj bommayi
09. ರೇಷ್ಮೆ ದ್ವಿತಳಿ ಮೊಟ್ಟಿ ಉತ್ಪಾದಿಸಿ ಶೈತ್ಯೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಶೈತ್ಯಾಗಾರಗಳ ನಿರ್ಮಾಣ. State Budget 2022
10. ಹಾವೇರಿಯಲ್ಲಿ 30 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಶ್ಮೆಗೂಡು ಮಾರುಕಟ್ಟೆ
11. ಕಾಳಿ ನದಿಯಿಂದ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ
12. ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆ.ಸಿ. ವ್ಯಾಲಿ ಎರಡನೆ ಹಂತವನ್ನು 445 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ
13. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ವಿಶ್ವವಿದ್ಯಾಲಯಗಳು.state budget 2022
14. ರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರಯೋಗಾಲಯ ಸ್ಥಾಪಿಸಲು 15 ಕೊಟಿ ರೂ.
15. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕು ಅಸ್ಪತ್ರೆಯನ್ನು 250 ಹಾಸಿಗೆಗಳ ಅಸ್ಪತ್ರೆಯಾಗಿ ಮೇಲ್ದರ್ಜೆಗೆ
16. ಹಾವೇರಿ ಜಿಲ್ಲೆ ಸವಣೂರಿನಲ್ಲಿ ಹೊಸ ಅಯುರ್ವೇದ ಕಾಲೇಜು
17. ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಯುಷ್ ವಿಭಾಗ
18. ಚಿತ್ರದುರ್ಗದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು.cm bommayi budget
19. ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ. ಅರಂಭದಲ್ಲಿ 10 ಕೋಟಿ ರೂ. ಹಂಚಿಕೆ
20. ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು
21. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ನಿಲಯಗಳ ಸಮುಚ್ಛಯ.State Budget 2022