KPSC 410 ಹುದ್ದೆಗಳಿಗೆ ಅರ್ಜಿ ಆಹ್ವಾನ!

KPSC Recruitment 2022

ಬೆಂಗಳೂರು

ಇಂದು ಮಾರ್ಚ್ 21 ಕರ್ನಾಟಕ ಲೋಕಸೇವಾ ಆಯೋಗ ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುತ್ತಿದೆ.Kpsc

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ಮಾಡಲಾಗಿದೆ.

ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿನ ಗ್ರೂಪ್‌ ‘ಸಿ’ ಭಾಗದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ, ಇದು ಕೇವಲ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.2022

ಇದು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಅಧಿಸೂಚನೆಯನ್ನು ಚೆನ್ನಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.KPSC Recruitment 2022

ಹುದ್ದೆಗಳ ಮಾಹಿತಿ

01. ಕಿರಿಯ ಅಭಿಯಂತರ (ಸಿವಿಲ್) ಉಳಿಕೆ ಮೂಲವೃಂದ 74, ಕಲ್ಯಾಣ ಕರ್ನಾಟಕ 15, ಒಟ್ಟು 89.

02. ಕಿರಿಯ ಆರೋಗ್ಯ ನಿರೀಕ್ಷಕರು. ಹಾಗೂ ಉಳಿಕೆ ಮೂಲವೃಂದ 55, ಕಲ್ಯಾಣ ಕರ್ನಾಟಕ 2, ಒಟ್ಟು 57.

03. ಎಲೆಕ್ಟ್ರೀಷಿಯನ್ ಗ್ರೇಡ್ -1. ಕಲ್ಯಾಣ ಕರ್ನಾಟಕ 2. ಒಟ್ಟು 2. ಎಲೆಕ್ಟ್ರೀಷಿಯನ್ ಗ್ರೇಡ್ -2. ಕಲ್ಯಾಣ ಕರ್ನಾಟಕ 10. ಒಟ್ಟು 10.

04. ನೀರು ಸರಬರಾಜು ಆಪರೇಟರ್. ಕಲ್ಯಾಣ ಕರ್ನಾಟಕ 89. ಒಟ್ಟು 89 ಹುದ್ದೆಗಳು.

05. ಸಹಾಯಕ ನೀರು ಸರಬರಾಜು ಆಪರೇಟರ್. ಕಲ್ಯಾಣ ಕರ್ನಾಟಕ 163. ಒಟ್ಟು 163 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳ ವಿದ್ಯಾರ್ಹತೆ

ಈ ಅರ್ಜಿಯ ಶುಲ್ಕಗಳು ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ, ನಿಗದಿಪಡಿಸಿದ ವಿದ್ಯಾರ್ಹತೆ ಹೊರತುಪಡಿಸಿ ಯಾವುದೇ ತತ್ಸಮಾನ ವಿದ್ಯಾರ್ಹತೆಯು ಸಹ ಪರಿಗಣಿಸಲಾಗುವುದಿಲ್ಲ.

ಅರ್ಜಿಯ ಶುಲ್ಕ

ಈ ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ  ಅಭ್ಯರ್ಥಿಗಳು 600 ರೂ., ಪ್ರವರ್ಗ 2(ಎ), 2 (ಬಿ), 3(ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕ ಪಾವತಿಯನ್ನು ಮಾಡಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇಡಲಾಗಿದೆ.

ಆದರೆ 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು, ಅಭ್ಯರ್ಥಿಗಳು ಶುಲ್ಕವನ್ನು ಕಡ್ಡಾಯವಾಗಿ ಪಾವತಿಯನ್ನು ಮಾಡಬೇಕು.Kpsc Recruitment 2022

ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ ಎಂದು ನೇಮಕಾತಿಯ ಆದೇಶದಲ್ಲಿ ತಿಳಿಸಲಾಗಿದೆ.

ವಯೋಮಿತಿಯ ವಿವರ

ಈ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.Recruitment 2022

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು ಆಗಿರಬೇಕು, ಗರಿಷ್ಠ ವಯೋಮಿತಿ 35 ವರ್ಷಗಳು ಹೊಂದಿರಬೇಕು.

ಪ್ರವರ್ಗ 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಆದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು ಒಳಗಿರಬೇಕು.Karnataka

ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರಲ್ಲಿ ನಿರ್ದಿಷ್ಟ ಪಡಿಸಿರುವಂತೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.DMA

ಸದರಿ ನಿಯಮಗಳಲ್ಲಿ ಗರಿಷ್ಠ ವಯೋಮಿತಿಯನ್ನು ಅಧಿಸೂಚನೆಯಲ್ಲಿ ತಿಳಿಸಿರುವಷ್ಟರ ಮಟ್ಟಿಗೆ ಹೆಚ್ಚು ಮಾಡಲಾಗಿದೆ.

ಆಯ್ಕೆಯ ವಿಧಾನ

ಕರ್ನಾಟಕ ನಾಗರೀಕ ಸೇವಾ(ನೇರ ನೇಮಕಾತಿ) ಸಾಮಾನ್ಯ ನಿಯಮಗಳು 2021 ರ ಉಪನಿಯಮ (7) ರನ್ವಯ ಅರ್ಜಿಯನ್ನು ಸಲ್ಲಿಸುವ ಎಲ್ಲ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದೆ.

ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ, ಈ ಪರೀಕ್ಷೆಯು ಗರಿಷ್ಟ 150 ಅಂಕಗಳ ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ.Recruitment

ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆಯನ್ನು ಹೊಂದಲು 50 ಅಂಕಗಳನ್ನು ಗಳಿಸಬೇಕು,

ನೀವು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಕನಿಷ್ಠ ಶೇಕಡಾ 35 ರಷ್ಟು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ.DMA Recruitment 2022

ಅರ್ಜಿ ಸಲ್ಲಿಕೆ ವಿವರಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ https://kpsc.kar.nic.in/ ಹೊಸದು ಏನು? ಬಾಕ್ಸ್‌ನಲ್ಲಿ ಕಾಣುವ ಅಧಿಸೂಚನೆ ಓದಿಕೊಳ್ಳುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಕೊನೆಯ ದಿನಾಂಕ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ 31-3-2022 ರಿಂದ 29-4-2022ರ ರಾತ್ರಿ 11.45ರ ತನಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕವನ್ನು ಪಾವತಿ ಮಾಡಲು ದಿನಾಂಕ 30-4-2022 ಕೊನೆಯ ದಿನವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಈ ರಾಶಿಯ ಕೌಟುಂಬಿಕ & ಹಣದ ಸಮಸ್ಯೆಗೆ ಪರಿಹಾರ!-Horoscope

https://jcs.skillindiajobs.com/

Social Share

Leave a Reply

Your email address will not be published. Required fields are marked *