ಸಚಿವ ಕೆ.ಎಸ. ಈಶ್ವರಪ್ಪ ರಾಜೀನಾಮೆ ಘೋಷಣೆ!-Santosh

Santosh Patil

Santosh Patil Death

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ವರಿಷ್ಠರು ನೀಡಿದ್ದ ಸೂಚನೆಯನ್ನು ಕಡೆಗಣಿಸಿ ಶಿವಮೊಗ್ಗದಲ್ಲಿ ಉಳಿದುಕೊಂಡಿದ್ದ K.S. Eshwarappa, ಪ್ರಾಥಮಿಕ ಹಂತದ ವರದಿ ಬರುವವರೆಗೆ ಮುಂದುವರಿಯುದಾಗಿ ಪಟ್ಟು ಹಿಡಿದ್ದಾರೆ.

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಕೇಸಿನಲ್ಲಿ ನೈತಿಕ ಹೊಣೆಹೊತ್ತು ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಆಗ್ರಹಣೆ ಮಾಡಿ ವಿಧಾನಸೌಧದ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಸದ್ಯ ಕೆಎಸ್ ಈಶ್ವರಪ್ಪ ಅವರನ್ನ ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದರ ಜೊತೆಗೆ ಕೇವಲ ಈಶ್ವರಪ್ಪ ಅವರು ರಾಜಿನಾಮೆ ನೀಡಿದರೆ ಸಾಕಾಗುವುದಿಲ್ಲ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿಯನ್ನು ನಡೆಸಿದೆ.

ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ಸದನದಲ್ಲಿಯೇ ಕಳೆದಿದ್ದಾರೆ, ಅಹೋರಾತ್ರಿ ಧರಣಿ ಮುಂದುವರೆಸುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಇದರ ಬೆನ್ನೆಲೆ ಗುರುವಾರ ಸಂಜೆ ಶಿವಮೊಗ್ಗದಲ್ಲಿ ಧಿಡೀರ್ ಪತ್ರಿಕಾ ಗೋಷ್ಠಿ ನಡೆಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

“ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತಪ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದರು.

ನಾನು ಯಾವ ತಪ್ಪು ಮಾಡಿಲ್ಲ, ಸಣ್ಣ ತಪ್ಪು ಮಾಡಿದರು ನನ್ನ ಮನೆ ದೇವರಾದ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಈಶ್ವರಪ್ಪ ಗದ್ಗದಿತರಾದರು.

Santosh ಆತ್ಮಹತ್ಯೆ ಪ್ರಕಣದ ವಿಚಾರವಾಗಿ ಮೂರು ವಿಷಯಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಕೆ.ಎಸ.ಈಶ್ವರಪ್ಪ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಪ್ರಕರಣ ದಾಖಲಾಗಬೇಕು, ಅವರನ್ನು ಕೂಡಲೇ ಬಂಧಿಸಬೇಕು, ಜೊತೆಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಆರೋಪಗಳ ನಡುವೆ K.S. Eshwarappa ಇಂದು ಸಂಜೆ ರಾಜೀನಾಮೆಯನ್ನು ನೀಡುತ್ತಾರೆ ಎಂದು ಹೇಳಿದ್ದು, ಇಂದು ಸಂಜೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಬಹುದು ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿಗಳು ಈ ಎಲ್ಲ ವಿಚಾರದಲ್ಲೂ ಭಾಗಿಯಾಗಿದ್ದು ಎಂದು ನಾವು ನೇರ ಆರೋಪ ಮಾಡಬೇಕಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಇದ್ದರೂ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ.

ಮೃತನ ಮರಣ ಸಂದೇಶ, ಮೃತನ ಸಹೋದರ, ಪತ್ನಿ, ತಾಯಿ ಎಲ್ಲರೂ ಭ್ರಷ್ಟಾಚಾರ ಕಿರುಕುಳದ ಆರೋಪ ಮಾಡಿದ್ದೂ, ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಆರೋಪಿ ಸಚಿವರಿಂದಾಗಿಯೇ ಈ ಪ್ರಕರಣ ನಡೆದಿದೆ.

ಹೀಗಾಗಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು, ಜತೆಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುತ್ತಿದೆ.

ಡಿಕೆ ಶಿವಕುಮಾರ್

ಈ ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಈಶ್ವರಪ್ಪ ಅವರನ್ನು ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ.

ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ ಹಾಗೆಯೇ ಇಲ್ಲವಾದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಡಿಕೆಶಿವಕುಮಾರ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ಮೂರನೇ ರಾಜೀನಾಮೆ

2019 ರಲ್ಲಿ ಈ ಬಿಜೆಪಿ ಸರಕಾರವು ರಚನೆ ಆದ ನಂತರ ಆರೋಪ ಹೊತ್ತು ರಾಜೀನಾಮೆ ನೀಡುತ್ತಿರುವ ಸಚಿವರಲ್ಲಿ ಈಶ್ವರಪ್ಪನವರು ಮೂರನೆಯವರು.

ಅಬಕಾರಿ ಸಚಿವರಾದ ಹೆಚ್.ನಾಗೇಶ ಭ್ರಷ್ಟಾಚಾರದ ಆರೋಪದ ಅಡಿಯಲ್ಲಿ 2021 ಜನೇವರಿಯಲ್ಲಿ ರಾಜಿನಾಮೆಯನ್ನು ನೀಡಿದ್ದಾರೆ.

ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದಲ್ಲಿ ಸಿಲುಕಿ 2021 ಮಾರ್ಚ್ 03 ರಂದು ರಾಜೀನಾಮೆ ಕೊಟ್ಟಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ ಜಯಂತಿಯ ಮಹತ್ವ & ಇತಿಹಾಸ!

https://jcs.skillindiajobs.com/

Social Share

Leave a Reply

Your email address will not be published. Required fields are marked *