ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಘೋಷಣೆ!

Mekedaatu Project Budget 2022

ರಾಜ್ಯ ಬಜೆಟ 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಪ್ರಥಮ ಆಯವ್ಯಯವನ್ನು ಮಂಡಿಸಿದ್ದಾರೆ.

ಸುಮಾರು 135 ನಿಮಿಷಗಳ ಸುದೀರ್ಘ ಬಜೆಟ್ ಮಂಡನೆಯಲ್ಲಿ ಕೆಲವು ಹೊಸ ಘೋಷಣೆ, ಕಾಮಗಾರಿ, ಅಭಿವೃದ್ದಿ ಯೋಜನೆಯನ್ನು ಸಿಎಂ ಪ್ರಕಟಿಸಿದ್ದಾರೆ.

ಬಜೆಟ್ ಪ್ರಮುಖ ಅಂಶಗಳಲ್ಲಿ ಒಂದು ಮೇಕೆದಾಟು ಯೋಜನೆಗೆ ಆಯವ್ಯಯದಲ್ಲಿ ಬರೋಬ್ಬರಿ 1 ಸಾವಿರ ಕೋಟಿ ರೂ. ಅನ್ನು ಮೀಸಲಿಟ್ಟಿರುವುದು.cm bommayi karnataka

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಕೂಡಿ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಟ್ಟು 14,700 ಕೋಟಿ ರೂ. ಘೋಷಣೆ

ಮೇಕೆದಾಟು ಯೋಜನೆ

ಎತ್ತಿನಹೊಳೆ ಯೋಜನೆಗೆ ಸುಮಾರು 3 ಸಾವಿರ ಕೋಟಿ ರೂ., ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂ. ಹಾಗೂ ಕಳಸಾ ಬಂಡೂರಿ ಯೋಜನೆಗೆ ಸಾವಿರ ಕೋಟಿ ರೂ. ನಿಯೋಜನೆ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ 2,65,719.92 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಮಂಡಿಸಿದ್ದಾರೆ.

ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇಕಡಾ 7.7ರಷ್ಟು ಹೆಚ್ಚಳವಾಗಿದೆ. ‘ಜಲ ಜೀವನ್‌ ಮಿಷನ್’ ಅಡಿ 25 ಲಕ್ಷ ಮನೆಗೆ ನಲ್ಲಿ ನೀರನ್ನು ನೀಡಲಾಗುತ್ತದೆ.cm basavaraj bommayi 2022

2022-23ರಲ್ಲಿ 7,000 ಕೋಟಿ ರೂ. ವೆಚ್ಚದಲ್ಲಿ ನಲ್ಲಿ ನೀರು ನೀಡಲಾಗುವುದು. ರಾಜ್ಯಾದ್ಯಂತ 25 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕಕ್ಕೆ ಯೋಜನೆಯನ್ನು ಮಾಡಲಾಗಿದೆ.Mekedaatu Project Budget 2022

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್​ನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬಜೆಟ್​ನಲ್ಲಿ ಪ್ರಾಧಾನ್ಯತೆಯನ್ನು ನೀಡಲಾಗಿದೆ.

ಬೆಂಗಳೂರು ಮೌಲ ಸೌಕರ್ಯಕ್ಕೆ 3 ವರ್ಷದಲ್ಲಿ 6,000 ಕೋಟಿ ರೂ ಅನುದಾನವನ್ನು ನೀಡಲು ನಿರ್ಧರಿಸಲಾಗಿದೆ.

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಹಾಗೂ ಬಂಡೂರಿ ನಾಲಾ ತಿರುವು ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಸೇರಿ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಟ್ಟು 14,700 ಕೋಟಿ ರೂ. ಘೋಷಣೆ ಮಾಡಲಾಗಿದೆ.

01. ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ (9ಎ) ಕಾಲುವೆ ಯೋಜನೆ ಅನುಷ್ಠಾನಕ್ಕೆ ಕ್ರಮ.

02. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಲು ಕ್ರಮ.

03. ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಖಾರ್‌ಲ್ಯಾಂಡ್ ಯೋಜನೆ ಅನುಷ್ಠಾನ, ಪ್ರಸ್ತುತ ಉತ್ತರ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ.

04. ಅಭಿವೃದ್ದಿಯಲ್ಲಿರುವ 14 ನೀರಾವತಿ ಯೋಜನೆ ಪೂರ್ಣಗೊಳಿಸಿ 35,319 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ.

05.  2021-22ನೇ ಸಾಲಿನಲ್ಲಿ ಮಂಡನೆ ಮಾಡಿರುವ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷ ಸಿದ್ಧಪಡಿಸಲು ಕ್ರಮ.cm basavaraj bommayi

06. ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ ಸುಮಾರು 500 ಕೋಟಿ ರೂ. ಕ್ರಿಯಾ ಯೋಜನೆಯಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ರೂ. ಅನುದಾನ.Mekedaatu Project Budget 2022

ರಾಜ್ಯ ಬಜೆಟ ಮಂಡನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

https://www.google.com/search?q=way2plot&oq=w&aqs=chrome.1.69i60j69i59l3j69i60l4.1259j0j4&sourceid=chrome&ie=UTF-8

Social Share

Leave a Reply

Your email address will not be published. Required fields are marked *