“ಹಿಂದಿ ಭಾಷೆಯ ಗುಲಾಮಗಿರಿ” ಸಿದ್ರಾಮಯ್ಯ ಕಿಡಿ!-Hindi Language

Hindi Language

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಅವಮಾನ ಮಾಡಿದ್ದಾರೆ.

ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ವಿವಿಧ ರಾಜ್ಯಗಳ ಜನರು Hindi Language ಮಾತನಾಡಬೇಕು, ಇಂಗ್ಲಿಷ್ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

‘ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಕೆ ಮಾಡುವುದಿಲ್ಲ.

ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕು ಎನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ’ ಎಂದು ಹೇಳಿದ್ದಾರೆ.

ವಿವಿಧ ರಾಜ್ಯಗಳ ಜನರು ಹಿಂದಿಯಲ್ಲಿ ಮಾತನಾಡಬೇಕು!

ಭಾರತ ದೇಶವು ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದಂತಹ ಮಹತ್ವವಿದೆ, ಆದರೆ ಪ್ರಪಂಚದಲ್ಲಿ ನಮ್ಮ ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಹೊಂದುವುದು ಅವಶ್ಯವಾಗಿದೆ.

ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಒಂದೇ ಹಿಂದಿ ಭಾಷೆ. ಹಿಂದಿ ಭಾಷೆಯನ್ನೇ ಹೆಚ್ಚು ಮಾತನಾಡಬೇಕು.

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ಮಾಡಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆಯನ್ನು ನೀಡಿದ್ದಾರೆ.

ಸಂಸದೀಯ ಅಧಿಕೃತ ಭಾಷಾ ಸಮಿತಿಯ 37 ನೇ ಸಭೆಯಲ್ಲಿ ಮಾತನಾಡಿದ ಇವರು, “ಸರ್ಕಾರವನ್ನು ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಮಾಡಿದ್ದಾರೆ.

ಇದು ಕೇವಲ Hindi Language ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ, ಇವಾಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯವು ಬಂದಿದೆ.

ಇಂತಹ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸಿದಾಗ ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಗೃಹ ಸಚಿವಾಲಯದಲ್ಲಿ ಉಲ್ಲೇಖಿಸಿದೆ.

ಸಿದ್ರಾಮಯ್ಯ ಆಕ್ರೋಶ!

Sidramaiah

ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದು.

ಆದರೆ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ ಎಂದು ಸಿದ್ದರಾಮಯ್ಯ ಅವರು ಅಮಿತ್ ಶಾ ವಿರುದ್ಧ ಕಿಡಿ ಕಾರಿದ್ದಾರೆ.

ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ, ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯವಾಗಿದೆ.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲಿದೆ.

ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ ಎಂದರು.

ಭಾರತ ದೇಶ ವಿವಿಧ ಭಾಷೆಗಳ ದೇಶ, ಪ್ರತಿಯೊಂದು ಭಾಷೆಗೂ ತನ್ನದೇ ಆದಂತಹ ಮಹತ್ವವಿದೆ. ಆದರೆ ಪ್ರಪಂಚದಲ್ಲಿ ನಮ್ಮ ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಹೊಂದುವುದು ಅವಶ್ಯವಾಗಿದೆ.

ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಒಂದೇ ಹಿಂದಿ. ಈ ಹಿಂದಿ ಭಾಷೆಯನ್ನೇ ಹೆಚ್ಚು ಮಾತನಾಡಬೇಕು.

ಹಿಜಾಬ್ ಕುರಿತು ಸಿದ್ರಾಮಯ್ಯ ಬಿಜೆಪಿಯ ಮೇಲೆ ವಾಗ್ದಾಳಿ ?-sidramaiah-news

https://jcs.skillindiajobs.com/

Social Share

Leave a Reply

Your email address will not be published. Required fields are marked *