rbi-recruitment-2022
ಅರಬಿಐ
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗುತ್ತದೆ, ಆಸಕ್ತಿ ಉಳ್ಳವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಮಾಹಿತಿಯನ್ನು ಪಡೆದುಕೊಳ್ಳಿ.
ಸೂಚನೆಯನ್ನು ಓದಿದ ತಕ್ಷಣ ಇಡೀ ದೇಶಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 8,2022 ಒಳಗೆ ಅರ್ಜಿಯನ್ನು ಹಾಕಬಹುದು.rbi-recruitment-2022
ಶೈಕ್ಷಣಿಕ ವಿದ್ಯಾರ್ಹತೆ
ಅರಬಿಐ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.rbi-recruitment-2022
ನೇಮಕಾತಿಯ ವಯೋಮಿತಿ
ಅರಬಿಐ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಗಳಿಗೆ ಅನುಸಾರವಾಗಿ ವಯಸ್ಸು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ತಿಳಿಸಿರಲಾಗುತ್ತದೆ.
ವೇತನ ವಿವರ
ಅರಬಿಐ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,650/- ರಿಂದ 34,990/-ರೂ ವೇತನದ ಜೊತೆಗೆ ಇತರೆ ಭತ್ಯೆಯನ್ನು ಕೊಡಲಾಗುತ್ತದೆ.rbi-recruitment-2022
ಆಯ್ಕೆಯ ಪ್ರಕ್ರಿಯೆ
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುವುದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27,2022ರಂದು ನಿಗದಿಪಡಿಸಲಾಗಿದೆ.
ಅರ್ಜಿಯ ಶುಲ್ಕ
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಸೂಚನೆಯನ್ನು ಓದಿಕೊಳ್ಳಬಹುದು.rbi-recruitment-2022
ಅರ್ಜಿ ಸಲ್ಲಿಕೆ
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ.
ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು.