2023 ರ ಚುನಾವಣೆಯಲ್ಲಿ ಸಿದ್ರಾಮಯ್ಯ ಔಟ್!-Sidramaiah

Sidramaiah

Sidramaiah

ಕರ್ನಾಟಕದಲ್ಲಿ ನಡೆದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣವು 300 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ಅಕ್ರಮ ನಡೆದಿದೆ ಎಂದು ಸರ್ಕಾರ ಒಪ್ಪಿಕೊಂಡಿದ್ದರೂ, ಹಗರಣ ಬಹಿರಂಗಗೊಂಡ ನಂತರ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಜನರಲ್ ಅಮೃತ್ ಪಾಲ್ ಮತ್ತು ಡಿಎಸ್ಪಿ ಶಾಂತಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಅಧಿಕಾರಿಗಳ ವಿರುದ್ಧ ಏಕೆ ಅಮಾನತು ಅಥವಾ ಎಫ್‌ಐಆರ್ ದಾಖಲಿಸಿಲ್ಲ ಎಂದು ನಾನು ಸರ್ಕಾರವನ್ನು ಕೇಳುತ್ತೇನೆ ಎಂದು ಸಿದ್ದರಾಮಯ್ಯ ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಅಕ್ಟೋಬರ್ 3, 2021 ರಂದು, ಕರ್ನಾಟಕದ ಏಳು ನಗರಗಳಲ್ಲಿ 92 ಕೇಂದ್ರಗಳಲ್ಲಿ ನಡೆಸಲಾದ 545 PSI ಹುದ್ದೆಗಳಿಗೆ 54,000 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಕರ್ನಾಟಕ ಪೊಲೀಸ್‌ನ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ ಇದೀಗ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ನಕಲು ಮಾಡಿದ ಪುರಾವೆಗಳನ್ನು ಕಂಡುಹಿಡಿದಿದೆ.

ಕರ್ನಾಟಕ ಪೊಲೀಸ್‌ನ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ ಇದೀಗ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ನಕಲು ಮಾಡಿದ ಪುರಾವೆಗಳನ್ನು ಕಂಡುಹಿಡಿದಿದೆ.

ನಲವತ್ತು ಪರ್ಸೆಂಟ್ ಕಮಿಷನ್, ಪಿಎಸ್‌ಐ ನೇಮಕಾತಿ ಹಗರಣದ ವಿಚಾರದಲ್ಲಿ ವಿರೋಧ ಪಕ್ಷದವರು ಆಡಳಿತ ಪಕ್ಷದವರ ವಿರುದ್ದ ಆಕ್ರೋಶ ಪಡಿಸುತ್ತಿದ್ದಾರೆ.

ಬಿಜೆಪಿಯು ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷರ ನಡುವೆ ಶೀತಲ ಸಮರ ನಡೆಯುತ್ತಿದೆ ಎಂದು ವಿಷಯಾಂತರ ಮಾಡುತ್ತಿದೆ.

ಬಿಜೆಪಿ ಸರ್ಕಾರ ಜನ ಸಮಾನ್ಯರ ಪೀಡಕ ಸರ್ಕಾರ, 40% ಭ್ರಷ್ಟಾಚಾರದ ಸರ್ಕಾರ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಇತ್ತ, ಮುಂದಿನ ಅಂದರೆ 2023ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲೇ ಇರುವುದಿಲ್ಲ ಎಂದು ಬಿಜೆಪಿ ತಿರುಚಿ ಹೇಳಲಾಗಿದೆ.

ಸಿದ್ರಾಮಯ್ಯ ಪ್ರತಿಕ್ರಿಯೆ

ಈ ವಿಷಯದ ಬಗ್ಗೆ ಮಾಧ್ಯದಮವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಿದ್ದರಾಮಯ್ಯ, “ಈ ರೀತಿಯ ಆಧಾರ ರಹಿತ ಹೇಳಿಕೆಗಳಿಗೆ ನಾನು ಉತ್ತರವನ್ನು ಕೊಡಲು ಹೋಗುವುದಿಲ್ಲ.

ನಾನು ಒಬ್ಬ ಕಾಂಗ್ರೆಸ್ಸಿಗ, ಅವರ ರೀತಿಯಲ್ಲಿ ದುಡ್ಡು ತೆಗೆದುಕೊಂಡು ಓಡಿ ಹೋಗುವುದಿಲ್ಲ”ಎಂದು ಸ್ಪಷ್ಟತೆಯನ್ನು ನೀಡಿದ್ದಾರೆ.

ಧರಣಿ

“ಅಶ್ವಥ್ ನಾರಾಯಣ ಮತ್ತು ಆರಗ ಜ್ಞಾನೇಂದ್ರ ರಾಜೀನಾಮೆ ಕೊಡುವ ವಿಚಾರದಲ್ಲಿ ಜನರ ಹತ್ತಿರ ಹೋಗುತ್ತೇವೆ, ನಾವೆಲ್ಲಾ ಧರಣಿ ನಡೆಸಿದ್ದಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿರುವುದು, ಈ ವಿಚಾರದಲ್ಲೂ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು”ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

“ಈಶ್ವರಪ್ಪ ರಾಜೀನಾಮೆ ವಿಚಾರದಲ್ಲಿ ವಿಧಾನಸೌಧದಲ್ಲಿ ಐದು ದಿನ ಧರಣಿಯನ್ನು ನಡೆಸಿದ್ದೆವು. ನಮ್ಮ ಸಂಘಟಿತ ಧರಣಿಯಿಂದಾಗಿ ಈಶ್ವರಪ್ಪನವರಿಂದ ಬಿಜೆಪಿ ರಾಜೀನಾಮೆ ಪಡೆಯಿತೇ ವಿನಃ, ನೈತಿಕತೆಯಿಂದ ಅಲ್ಲ”ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಪಕ್ಷದೊಳಗೆ ಚರ್ಚೆಯನ್ನು ನಡೆಸಿ, ಪಿಎಸ್‌ಐ ನೇಮಕಾತಿ ಹಗರಣದ ವಿಚಾರದಲ್ಲೂ ಹೋರಾಟವನ್ನು ಮಾಡಲಿದ್ದೇವೆ.

ನಮ್ಮರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬಂದು ಪರವಾನಿಗೆಯನ್ನು ಒತ್ತಿಹೋಗಿದ್ದಾರೆ” ಎಂದು ಸಿದ್ದರಾಮಯ್ಯ ಲೇವಡಿ ಹೇಳಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಯಿಂದ “ಇಫ್ತಾರ್ ಪಾರ್ಟಿ” ಏರ್ಪಾಟು!-Iftar Party

https://jcs.skillindiajobs.com/

Social Share

Leave a Reply

Your email address will not be published. Required fields are marked *