Significance of Kannada Rajyotsava

ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಕನ್ನಡಿಗರು ಅರಿತಾಗ ಮಾತ್ರ ಆಚರಣೆ ಸಾರ್ಥಕ- Significance of Kannada Rajyotsava

Significance of Kannada Rajyotsava
  • ನಾಡಿನ ಸಮಸ್ತ ಜನತೆಗೆ ೬೬ ನೇ
    ಕರ್ನಾಟಕ ರಾಜ್ಯೋತ್ಸವದ
    ಶುಭಾಶಯಗಳು ****”

ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ.

ಮೈಸೂರು ಪ್ರಾಂತ್ಯ ಎಂಬ ಹೆಸರಿನ ಮೂಲಕ ಕರೆಯಲ್ಪಡುತ್ತಿದ್ದ ಹಾಗೂ ವಿಭಾಗಗಳಾಗಿ ಚದುರಿದ್ದ ನಾಡನ್ನು 1956ರ ನವೆಂಬರ್ 1ರಂದು “ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು.

ಅಂದಿನಿಂದ ಪ್ರತಿ ವರ್ಷ ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ನಾವು 66ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೇವೆ.

Significance of Kannada Rajyotsava


ಕರ್ನಾಟಕದ ಇತಿಹಾಸ ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು.

ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು.

ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು.

ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು.ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ.

ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಕನ್ನಡ ರಾಜ್ಯೋತ್ಸವದ ಮಹತ್ವ ಕನ್ನಡದ ಇತಿಹಾಸ, ಮಹತ್ವ,

ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.

ಅಲ್ಲದೇ ನಾಡಿಗಾಗಿ, ಕನ್ನಡಕ್ಕಾಗಿ ದುಡಿದ ಮಹನೀಯರಿಗೆ ಈ ಮಾಸದಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಗೌರವಿಸುವ ಮೂಲಕ, ನಾಡಿನ ಸೇವೆಯನ್ನು ಮುಂದುವರೆಸಲು ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ.

ಕನ್ನಡ ನಾಡಿನ ಮಹತ್ವವನ್ನು ಕನ್ನಡಿಗರು ಅರಿತಾಗ ಮಾತ್ರ ಕನ್ನಡ ರಾಜ್ಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ ಕರ್ನಾಟಕ ನಾಡು ಏಕೀಕರಣವಾಗಲು ನಾಡಿನ ಹಲವು ಕವಿಗಳು, ಸಾಹಿತಿಗಳು, ನಟರು, ವಿಚಾರವಂತರು ಸೇರಿದಂತೆ ಹಲವು ಮಹನೀಯರ ಕೊಡುಗೆ ಅಪಾರ.

ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾವ್, ಅನಕೃ, ಕೆ.ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್, ಬಿ. ಎಂ. ಶ್ರೀಕಂಠಯ್ಯ, ನಾಡಿಗೇರ್, ಹುಯಿಲಗೋಳ ನಾರಾಯಣರಾವ್,

ಆಚಾರ್ಯ, ಜಿ. ಬಿ. ಜೋಷಿ, ಕೆ. ವಿ. ಅಯ್ಯರ್, ವಿ. ಬಿ. ನಾಯಕ್, ಕರ್ಣ, ಗಂಗಾಧರ ದೇಶಪಾಂಡೆ, ಡೆಪ್ಯುಟಿ ಚೆನ್ನಪಬಸಪ್ಪ, ಮಂಗಳವೇಡೆ ಶ್ರೀನಿವಾಸರಾಯರು, ಕೆಂಗಲ್ ಹನುಂತಯ್ಯ,

ಎಚ್. ಎಸ್. ದೊರೆಸ್ವಾಮಿ, ಕೋ. ಚನ್ನಬಸಪ್ಪ, ಅಲ್ಲಂ ಸುಮಂಗಳಮ್ಮ, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಪಾಟೀಲ್ ಪುಟ್ಟಪ್ಪ, ಹಾರನಹಳ್ಳಿ ರಾಮಸ್ವಾಮಿ ಸೇರಿದಂತೆ ನೂರಾರು ಮಹನೀಯರು,

ಲಕ್ಷಾಂತರ ಪ್ರಜೆಗಳ ಹೋರಾಟದ ಫಲವಾಗಿ ನಾವಿಂದು ಏಕೀಕೃತ ನಾಡನ್ನು ಕಟ್ಟಿಕೊಂಡಿದ್ದೇಕನ್ನಡ ನಾಡಿನ ಮರುಹುಟ್ಟಿನ ದಿನವಾದ ನವೆಂಬರ್ 1ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಬೇಧವಿಲ್ಲದೆ ಒಗ್ಗಟ್ಟಿನಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಾರೆ.

ಅರಿಶಿನ ಹಾಗೂ ಕುಂಕುಮದ ಸಂಕೇತ ಕರ್ನಾಟಕ ಹಳದಿ ಕೆಂಪು ಮಿಶ್ರಿತ ಧ್ವಜವನ್ನು ಸರ್ಕಾರಿ ಕಚೇರಿ, ಕಂಪನಿಗಳು, ಶಾಲಾ-ಕಾಲೇಜುಗಳಲ್ಲಿ ಹಾರಿಸುತ್ತಾ,

ಕುವೆಂಪು ರಚಿತ ಜಯ ಭಾರತದ ಜನನಿಯ ತನುಜಾತೆ ನಾಡಗೀತೆ ಸೇರಿದಂತೆ ನಾಡಿನ ಹಿರಿಮೆಯನ್ನು ಬಿಂಬಿಸುವ ಗೀತೆಗಳ ಮೂಲಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದಿರಲಿ.ಸುಮಾರು ಎರಡೂವರೆ ಸಹಸ್ರಮಾನದ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಸಹ ಪ್ರಮುಖವಾಗಿದೆ.

ಆದರೆ ವಿಷಾದವೆಂದರೆ ಇಂದಿನ ಪೋಷಕರು ಹಾಗೂ ಮಕ್ಕಳಿಗೆ ನಾಡಿನ ಭಾಷೆ, ಸಂಸ್ಕೃತಿಯ ಬಗ್ಗೆ ಅಷ್ಟು ಕಾಳಜಿ ಇದ್ದಂತೆ ಕಾಣುತ್ತಿಲ್ಲ.

ಶಾಲೆಯಲ್ಲಿ ಬಿಡಿ ಮನೆಯಲ್ಲೂ ಕನ್ನಡ ಮಾತನಾಡದಂತೆ ಪೋಷಕರು ಮಕ್ಕಳಿಗೆ ತಾಕೀತು ಮಾಡುತ್ತಾರೆ ಎಂಬುದು ನಿಜಕ್ಕೂ ವಿಪರ್ಯಾಸ. ಭವಿಷ್ಯಕ್ಕಾಗಿ ಇಂಗ್ಲಿಷ್ ಬಳಕೆ ಅಥವಾ ಕಲಿಕೆ ಅನಿವಾರ್ಯವಾದರೂ ಕನ್ನಡವನ್ನು ಕಡೆಗಣಿಸುವುದು ಬೇಡ.

ನಾವು ಮನೆಗಳಲ್ಲೇ ಮಕ್ಕಳಿಗೆ ಈಗಿನಿಂದಲೇ ಕನ್ನಡ ಆಂಗ್ಲಮಯವಾಗಿ ಬೆಳಸಿದರೆ ಮುಂದೆ ಕನ್ನಡ ಭಾಷೆಯ ಅಸ್ತಿತ್ವವೇ ಇಲ್ಲವಾಗಬಹುದು. ಈ ಬಗ್ಗೆ ಎಲ್ಲಾ ಪೋಷಕರು ಖಂಡಿತವಾಗಿಯೂ ಚಿಂತಿಸಬೇಕಿದೆ.

ಇನ್ನು ಮುಂದಾದರೂ ಮಕ್ಕಳಿಗೆ ಕನ್ನಡ ಭಾಷೆ, ಇದರ ಹಿರಿಮೆ, ಮಹತ್ವವನ್ನು ತಿಳಿಸಲು ಮುಂದಾಗೋಣ. ಕನ್ನಡ ಎಂದಿಗೂ ನಮ್ಮನ್ನು ಹೆತ್ತ ತಾಯಿಯಾಗಿಯೇ ಉಳಿಯಲಿ, ಇತರೆ ಭಾಷೆಗಳನ್ನು ನಮ್ಮ ಸಂಬಂಧಿಕರಂತೆ ಭಾವಿಸೋಣ.

ಅಂತೆಯೇ, ಯಾವುದೇ ಕನ್ನಡ ಪರ ಸಂಘಟನೆಗಳು ಸಹ ನವೆಂಬರ್ ಮಾಸಕ್ಕೆ ಮಾತ್ರ ಕನ್ನಡ ರಾಜ್ಯೋತ್ಸವವನ್ನು ಮೀಸಲಾಗಿಸದೇ ಕನ್ನಡ ಪರ ಹೋರಾಟಗಳನ್ನು,

ಜಾಗೃತಿ ಅಥವಾ ಅರಿವು ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಯೋಜಿಸುವುದು ಕನ್ನಡ ರಾಜ್ಯೋತ್ಸವಕ್ಕೆ ಅರ್ಥಪೂರ್ಣ ಎನಿಸುತ್ತದೆ.ನಮಗೆ ಗೊತ್ತಿರಲಿ*Significance of Kannada Rajyotsava
ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಭಾಷೆ ಎಂದರೆ ಕನ್ನಡ. ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ವಿ.ಕೃ.ಗೋಕಾಕ್,

ಮಾಸ್ತಿ ವೆಂಕಟೇಶ ಅಯ್ಯಂಗಾರ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಈ ಎಂಟು ಜನ ಸಾಹಿತ್ಯದ ಬೇರೆ ಬೇರೆ ಪ್ರಾಕಾರಗಳಲ್ಲಿ ಕೃಷಿ ಮಾಡಿ ಕನ್ನಡಕ್ಕೆ ಗರಿಷ್ಠ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು.
!I ಸಿರಿಗನ್ನಡಂ ಬಾಳ್ಗೆ,
ಸಿರಿಗನ್ನಡಂ ಗೆಲ್ಗೆ,
ಸಿರಿಗನ್ನಡಂ ಏಳ್ಗೆ II

  • ಕನ್ನಡವೇ ಸತ್ಯ ಕನ್ನಡವೇ ನಿತ್ಯ *

ಮಲ್ಲಿಕಾರ್ಜುನ ಚಿಕ್ಕಮಠ
ಧಾರವಾಡ.

Social Share

Leave a Reply

Your email address will not be published. Required fields are marked *