ಔರಾದ್ ತಹಸೀಲ್ದಾರರಿಂದ ವಾಲ್ಮೀಕಿ ಜಯಂತಿ ಆಚರಣೆ

ಔರಾದ್ ತಹಸೀಲ್ದಾರ್ ಆದ ಶ್ರೀ ಎಂ ಚಂದ್ರಶೇಖರ್ ಅವರು ಸಮಸ್ತ ಜನತೆಗೆ ಪರಮಪೂಜ್ಯ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿಯ ಹಾರ್ದಿಕ ಶುಭಾಶಯಗಳು. ಮತ್ತು ಸಮಸ್ತ ಜನತೆಗೆ ಪರಮಪೂಜ್ಯ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿಯ ಹಾರ್ದಿಕ ಶುಭಾಶಯಗಳು. ಔರಾದ(ಬಾ) ಪಟ್ಟಣ ಪಂಚಾಯತಿ ಸದಸ್ಯರಾದ್ ಸಂತೋಷ್ ಪೋಕಲವಾರ್ ಹಾಗು ಶೇಷಾರಾವ್ ಕೋಳಿ ಮತ್ತು ಸಚೀನ್ ಕೋಳಿ , ಭಾರತ್ ಪೋಕಲ್ವರ್ ,ಆಕಾಶ ಪೋಕಲವಾರ್ ,ಬಾಲಾಜಿ .ಸಚಿನ್ ಗೌಳಿ ,ಮಹೇಶ್ ವಾಘಮಾರೆ ಮತ್ತು ಕಾರ್ತೀಕ ಸ್ವಾಮಿ ಗಣೇಶ್ ಸ್ವಾಮಿ ಇತರು.

ವಾಲ್ಮೀಕಿ ಮಹರ್ಷಿ ಅವರ ಜೀವನ, ಅದ್ವಿತೀಯ ಪಾಂಡಿತ್ಯ ಸರ್ವರಿಗೂ ಸದಾಕಾಲ ಮಾದರಿಯಾಗಲಿ.

ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಅದರಲ್ಲಿ ಒಂದು ಕಥೆಯ ಪ್ರಕಾರ, ವಾಲ್ಮೀಕಿ ಋಷಿಯಾಗುವ ಮೊದಲು ರತ್ನಾಕರ . ನಾರದನ ಉಪದೇಶದಿಂದ ರತ್ನಾಕರನಿಗೆ ಜ್ಞಾನೋದಯವಾಯಿತೆಂದು ಹೇಳಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಪ್ರಚೇತಸ ಮುನಿಯ ಮಗ. ಹೀಗಾಗಿ ಅವರಿಗೆ ‘ಪ್ರಾಚೇತಸ’ ಎಂಬ ಹೆಸರಿದೆ. ಪರಮಾತ್ಮನನ್ನು ಕುರಿತು ಬಹಳ ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದಾಗ ಅವರ ಸುತ್ತ ಹುತ್ತ ಬೆಳೆದಿತ್ತು. ಹುತ್ತ(ಸಂಸ್ಕೃತದಲ್ಲಿ-ವಲ್ಮೀಕ)ವನ್ನು ಭೇದಿಸಿಕೊಂಡು ಹೊರಗೆ ಬಂದಿದ್ದರಿಂದ ‘ವಾಲ್ಮೀಕಿ’ ಎಂಬ ಹೆಸರು ಬಂತು.

ವಾಲ್ಮೀಕಿ ಮಹರ್ಷಿಗಳು ತಮಸಾ ನದೀತೀರದಲ್ಲಿ ಸಂತೋಷವಾಗಿ ಹಾರಾಡುತ್ತಿದ್ದ ಕ್ರೌಂಚಪಕ್ಷಿ ಜೋಡಿಯನ್ನು ನೋಡುತ್ತಿದ್ದಾಗ, ಬೇಡನೊಬ್ಬನು ಬಂದು ಬಾಣ ಹೂಡಿ ಅವುಗಳಲ್ಲಿ ಗಂಡು ಹಕ್ಕಿಯನ್ನು ಕೊಂದು ಬಿಡುತ್ತಾನೆ. ಅದರ ಸಂಗಾತಿ ಹೆಣ್ಣು ಹಕ್ಕಿಯು ಸಂಕಟದಿಂದ ಕೂಗಲಾರಂಭಿಸುತ್ತದೆ. ಈ ಹೃದಯ ವಿದ್ರಾವಕ ಸನ್ನಿವೇಶವನ್ನು ನೋಡಿ, ಕರುಣೆ, ದುಃಖ, ಕೋಪದಿಂದ ಮಹರ್ಷಿಗಳು ಬೇಡನನ್ನು ಶಪಿಸುವಾಗ, ಶೋಕದಿಂದ ಕೆಳಕಂಡ ವಾಕ್ಯವನ್ನು ಶ್ಲೋಕ ರೂಪದಲ್ಲಿ ಉದ್ಗರಿಸುತ್ತಾರೆ.

ಈ ಶ್ಲೋಕವು ಗದ್ಯರೂಪದಲ್ಲಿರದೆ, ಪ್ರಾಸಬದ್ಧವಾಗಿ,ಲಯ-ಛಂದಸ್ಸುಗಳಿಂದ ಕೂಡಿತ್ತು.

ರಾಮನು ಅಯೋಧ್ಯೆಯ ಕೆಲವು ಸಾಮಾನ್ಯ ಜನರು ಸೀತೆಯ ಬಗೆಗೆ ಅರೋಪ ಮಾಡುತ್ತಿರುವುದನ್ನು ಗೂಢಚಾರರ ಮೂಲಕ ತಿಳಿದು (ಅಗಸನ ಆರೋಪಣೆಗೆ ಎಂದು ಕನ್ನಡ ಜೈಮಿನಿ ಭಾರತದಲ್ಲಿ ಲಕ್ಷೀಶ ಕವಿಯು (ಮೂಲವನ್ನು ಬದಲಾಯಿಸಿ ಸೇರಿಸಿದ್ದಾನೆ-ಅಥವಾ ಜೈಮಿನಿ ಋಷಿಯು ತನ್ನ ಸಂಸ್ಕೃತದ ಜೈಮಿನಿ ಭಾರತದಲ್ಲಿ ಮೂಲವನ್ನು ಬದಲಾಯಿಸಿದ್ದಾನೆ) ನೊಂದು ತುಂಬು ಗರ್ಭಿಣಿ ಸೀತೆಯನ್ನು ಪರಿತ್ಯಾಗ ಮಾಡುತ್ತಾನೆ. ರಾಮನ ಆಜ್ಞೆಯಂತೆ ಲಕ್ಷಣನು ಸೀತೆಯನ್ನು (ಲಕ್ಷ್ಮಣ ತನ್ನ ವಿವೇಕವನ್ನು ಉಪಯೋಗಿಸಿ ವಾಲ್ಮೀಕಿ ಮುನಿಯ ಆಶ್ರಮದ ಹತ್ತಿರ) ಕಾಡಿನಲ್ಲಿ ಬಿಟ್ಟು ಹೋಗುತ್ತಾನೆ. ಅರಣ್ಯದಲ್ಲಿ ಶೋಕತಪ್ತಳಾಗಿದ್ದ ಸೀತೆಯನ್ನು ವಾಲ್ಮೀಕಿ ಮಹರ್ಷಿಗಳು ತಮ್ಮ ಆಶ್ರಮಕ್ಕೆ ಕರೆತಂದು, ಋಷಿಪತ್ನಿಯರ ಮೂಲಕ ಆಕೆಯನ್ನು ಉಪಚರಿಸಿ, ಆದರಿಸುತ್ತಾರೆ. ಅಲ್ಲೇ ಲವ-ಕುಶರ ಜನನವಾಗುತ್ತದೆ. ಆ ಅವಳಿ ಮಕ್ಕಳಿಗೆ ವಾಲ್ಮೀಕಿ ಮಹರ್ಷಿಗಳೇ ಗುರುಗಳು. ರಾಮಾಯಣ ಮಹಾಕಾವ್ಯದ ಗಾಯನವನ್ನು ಲವ-ಕುಶರಿಗೆ ಕಲಿಸಿಕೊಡುತ್ತಾರೆ. ವಾಲ್ಮೀಕಿ ಮಹರ್ಷಿಗಳು ಲವ-ಕುಶರ ಸಂಗಡ ರಾಮನಲ್ಲಿಗೆ ಬಂದು ರಾಮಾಯಣವನ್ನು ಗಾನ ಮಾಡುತ್ತಾರೆ. ರಾಮನಲ್ಲಿಗೆ ಸೀತೆಯನ್ನೂ ವಾಲ್ಮೀಕಿ ಮಹರ್ಷಿಗಳೇ ಕರೆತರುತ್ತಾರೆ..

Social Share

Leave a Reply

Your email address will not be published. Required fields are marked *